( ರಾಗ ಬೆಹಾಗ್. ಆದಿ ತಾಳ)

ಹರಿ ಕುಣಿದ, ನಮ್ಮ ಹರಿ ಕುಣಿದ ||ಪ||

ಅಕಳಂಕಚರಿತ ಮಕರಕುಂಡಲಧರ
ಸಕಲರ ಪಾಲಿಪ ಹರಿ ಕುಣಿದ ||

ಅರಳೆಲೆಮಾಗಾಯಿ ಕೊರಳ ಮುತ್ತಿನ ಸರ
ತರಳೆಯರೊಡಗೂಡಿ ಹರಿ ಕುಣಿದ ||

ಅಂದುಗೆ ಅರಳೆಲೆ ಬಿಂದುಲ್ಲಿ ಬಾಪುರಿ
ಚೆಂದದಿ ನಲಿವುತ್ತ ಹರಿ ಕುಣಿದ ||

ಉಟ್ಟ ಪಟ್ಟೆಯ ದಟ್ಟಿ ಇಟ್ಟ ಕಾಂಚಿಯ ದಾಮ
ದಿಟ್ಟ ಮಲ್ಲರ ಗಂಡ ಹರಿ ಕುಣಿದ ||

ಪರಮಭಾಗವತರ ಕೇರಿಯೊಳಾಡುವ
ಪುರಂದರವಿಠಲ ಹರಿ ಕುಣಿದ ||