(ರಾಗ ಪೀಲು ಆದಿ ತಾಳ )
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ||ಪ ||
ಸುರನರರಿಗೆ ಒಲಿದು ಕರುಣವ ಬೀರುವ ದೊರೆಯೆ ಲಾಲಿ ||ಅ ||
ರಾಮ ಲಾಲಿ ಮೇಘಶ್ಯಾಮ ಲಾಲಿ
ರಮಾಮನೋಹರ ಅಮಿತಸದ್ಗುಣಧಾಮ ಲಾಲಿ ||
ಕೃಷ್ಣ ಲಾಲಿ ಸರ್ವೋತ್ಕೃಷ್ಟ ಲಾಲಿ
ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆವ ಸಂತುಷ್ಟ ಲಾಲಿ ||
ರಂಗ ಲಾಲಿ ಮಂಗಳಾಂಗ ಲಾಲಿ
ಗಂಗೆಯ ಪಡೆದ ತುಂಗ ಮಹಿಮ ನರಸಿಂಗ ಲಾಲಿ ||
ನಂದ ಲಾಲಿ ಗೋಪೀಕಂದ ಲಾಲಿ
ಮಂದರಗಿರಿಧರ ಮಧುಸೂದನ ಮುಕುಂದ ಲಾಲಿ ||
ಶೂರ ಲಾಲಿ ರಣಧೀರ ಲಾಲಿ
ಮಾರನಯ್ಯ ನಮ್ಮ ಗುರು ಪುರಂದರವಿಠಲ ಲಾಲಿ ||
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!