(ರಾಗ ಆರಭಿ ಆದಿ ತಾಳ )

ಲಾಲಿಸಿದಳು ಮಗನ, ಯಶೋದೆ
ಲಾಲಿಸಿದಳು ಮಗನ ||ಪ||

ಅರಳೆಲೆ ಮಾಗಾಯಿ ಬೆರಳಿಗುಂಗುರವಿಟ್ಟು
ತರಳನ ಮೈಸಿರಿ ತರುಣಿ ನೋಡುತ ಹಿಗ್ಗಿ ||

ಬಾಲಕನೆ ಕೆನೆ ಹಾಲು ಮೊಸರನೀವೆ
ಲೀಲೆಯಿಂದಲಿ ಎನ್ನ ತೋಳ ಮೇಲ್ ಮಲಗೆಂದು ||

ಮುಗುಳುನಗೆಯಿಂದ ಮುದ್ದು ತಾ ತಾರೆಂದು
ಜಗದೊಡೆಯನ ಶ್ರೀ ಪುರಂದರವಿಠಲನ ||