(ರಾಗ ಕಾನಡ ರೂಪಕ ತಾಳ )

ನಾ ನಿನ್ನ ಧ್ಯಾನದೊಳಿರಲು ಮಿಕ್ಕ
ಹೀನ ಮಾನವರೇನು ಮಾಡಬಲ್ಲರೊ ರಂಗ ||ಪ||

ಮಚ್ಚರಿಸುವರೆಲ್ಲ ಕೂಡಿ ಮಾಡುವುದೇನು
ಅಚ್ಯುತ ನಿನದೊಂದು ದಯೆಯಿರಲು
ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ
ಕಿಚ್ಚಿಗೆ ಇರುವೆ ಮುತ್ತುವುದೆ ಕೇಳಲೊ ರಂಗ ||

ಧೂಳಿಲಿ ಕುದುರೆ ವೈಯಾರದಿ ಕುಣಿಯಲು
ಧೂಳು ರವಿಯ ಮೇಲೆ ಮುಸುಕುವುದೆ
ತಾಳಿದವರಿಗೆ ವಿರುದ್ಧ ಲೋಕದಲುಂತೆ
ಗಾಳಿಗೆ ಗಿರಿಯು ಅಲ್ಲಾಡಬಲ್ಲುದೆ ರಂಗ ||

ಕನ್ನಡಿಯೊಳಗಿನ ಗಂಟು ಕಂಡು ಕಳ್ಳ
ಕನ್ನವಿಕ್ಕಲವನ ವಶವಹುದೆ
ನಿನ್ನ ನಂಬಲು ಮುದ್ದು ಪುರಂಡರವಿಟ್ಠಲ
ಚಿನ್ನಕೆ ಪುಟವನಿಟ್ಟಂತೆ ಅಹುದು ರಂಗ ||