ರಾಗ ಮೋಹನ/ಖಂಡಚಾಪು
ಕಂಡು ಕಂಡು ನೀಯೆನ್ನ ಕೈಬಿಡುವರೆ
ಪುಂಡರೀಕಾಕ್ಷ ಪುರುಷೋತ್ತಮ ಹರೇ || ಪಲ್ಲವಿ ||
ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣ || ೧ ||
ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ
ಎಣಿಸಲಾರದ ಭವದಿ ನೋಂದಿಹೆ ನಾನು
ಸನಕಾದಿ ಮುನಿವೃಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀ ಕೃಷ್ಣ || ೩ ||
ಭಕ್ತವತ್ಸಲನೆಂಬ ಬಿರುದ ಪೊತ್ತಾ ಮೇಲೆ
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ನೀನು ಹೊನ್ನುರುಪುರವಾಸ
ಶಕ್ತಗುರು ಪುರಂದರವಿಠಲ || ೩ ||
~~~*~~~
[ಪುರಂದರ ಸಾಹಿತ್ಯ ದರ್ಶನ - ಭಾಗ ೧]
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!