ಅಣುಗಿದ್ದು ಬೇಸಗೆಯೊಳ್, ಎದ್ದು ಮಳೆ ಕರೆದಂದು|
ಗುಣಿಯೆನದೆ ತಿಟ್ಟೆನದೆ ಸಿಕ್ಕಿದೆಡೆ ಬೆಳೆದು||
ಉಣಿಸನೀವನು ದನಕೆ, ತಣಿವನೀವನು ಜಗಕೆ|
ಗುಣಶಾಲಿ ತೃಣಸಾಧು- ಮಂಕುತಿಮ್ಮ||