ಎಡರು ತೊಡರೆನಲೇಕೆ? ಬಿಡಿಸು ಮತಿಗಾದನಿತ |
ದುಡಿ ಕೈಯಿನಾದನಿತು; ಪಡು ಬಂದ ಪಾಡು||
ಬಿಡು ಮಿಕ್ಕುದನು ವಿಧಿಗೆ; ಬಿಡದಿರುಪಶಾಂತಿಯನು|
ಬಿಡುಗಡೆಗೆ ದಾರಿಯಿದು - ಮಂಕುತಿಮ್ಮ ||