ವಿಷಣ್ಣತೆ

ಎನ್ನ ಕೊನೆಯ ದಿನಗಳ ಮೊದಲ ದಿನಗಳಿವು|

ಬಂದ ದಾರಿಯನೊಮ್ಮೆ ನಿಂತು ನೋಡಿದೆ ಮನವು|| 

ಗುಣಿಸಿ ಭಾಗಿಸಿ ಕೂಡಿಸಿ ಕಳೆದುಳಿದ ಶೇಷವು|

ಸೋಲೋ ಗೆಲುವೋ ತಿಳಿಯದ ವಿಷಣ್ಣಭಾವವು||