ತಿರುಗಿನೋಡಿದ ಮೋರೆ ಮಱೆಯಾಗಿ ಹೋಯ್ತೇಕೆ
ತಿರುಗೆ ತಿರುತಿರುಗಿ ನೋಡದೇಕೆ
ಕಂಡು ಕಾಣದ ಚೆಲುವು ಕೇಳಿ ಕೇಳದ ಇನಿಪು
ತನ್ನ ಮೆಯ್ಯ ಮಾಟವನ್ನು ತೋಱದೇಕೆ
ಕನಲಿ ಮಸಿಯಾಗುವ ಮುನ್ನ ಬರೆದಿಟ್ಟ ಓಲೆಗಳು
ತಂತಮ್ಮ ಗಮ್ಯಗಳ ಸೇರವೇಕೆ
ಕೊನೆಯ ಕೊಳ್ಳುವನ್ನಕ ಇಡಿದಿಡಿವ ಚಾಣಗಳು
ಅಱೆಯಿಂದ ರೂಪೊಂದ ಕಡೆಯವೇಕೆ
ಮತ್ತೆ ಒರೆಯುವ ಮುನ್ನ ತಡವರಿಸಿ ಮಾತುಗಳು
ಪಿಸಿಯುತ್ತ ತಾವ್ತಾವೇ ಉಲಿಯವೇಕೆ
ಮತ್ತೆ ಕರೆಯುವ ಮುನ್ನ ಕರೆದಿದ್ದ ಧ್ವನಿಗಳು
ತಂತಮ್ಮ ಜಾಡುಗಳ ತೋಱವೇಕೆ
ತಿರುಗಿನೋಡಿದ ಮೋರೆ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!