ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? |

ಭ್ರಮಿಪುದೇನಾಗಾಗ ಕರ್ತೃವಿನ ಮನಸು? ||

ಮಮತೆಯುಳ್ಳವನಾತನಾದೊಡೀ ಜೀವಗಳು|

ಶ್ರಮಪಡುವುವೇಕಿಂತು? - ಮಂಕುತಿಮ್ಮ ||