ಏನು ಪ್ರಪಂಚವಿದು! ಏನು ಧಾಳಾಧಾಳಿ! |

ಏನದ್ಭುತಾಪಾರಶಕ್ತಿನಿರ್ಘಾತ! ||

ಮಾನವ ಗುರಿಯೇನು? ಬೆಲೆಯೇನು? ಮುಗಿವೇನು? |   

ಏನರ್ಥವಿದಕೆಲ್ಲ?- ಮಂಕುತಿಮ್ಮ ||