ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು?|

ಧರಣಿಗನುದಿನದ ರಕ್ತಾಭಿಷೇಚನೆಯೆ? ||

ಕರವಾಲವನು ಪುಷ್ಪಸರವೆಂದು ಸೆಳೆದಾಡೆ |

ಪರಿಮಳದ ಸೂಸುವುದೇ? - ಮಂಕುತಿಮ್ಮ ||