ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ

ಇಷ್ಟ ಮೋಹಕ ದಿವ್ಯಗುಣಗಳೊಂದು ಕಡೆ

ಕಷ್ಟ ಬೀಭತ್ಸ ಘೋರಂಗಳಿನ್ನೊಂದು ಕಡೆ

ಕ್ಲಿಷ್ಟವೀ ಬ್ರಹ್ಮಕೃತಿ - ಮಂಕುತಿಮ್ಮ