ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯಹಿಂದೆ?

ನಚ್ಚುವುದೆ ಮರೆಯೊಳಿಹುದನೆ ಸತ್ಯವೆಂದು?

ಅಚ್ಚರಿಯ ತಂತ್ರವಿದು; ಬ್ರಹ್ಮ ಸೃಷ್ಟಿಗಳೇಕೊ

ಮುಚ್ಚಿಹವು ಸಾಜತೆಯ - ಮಂಕುತಿಮ್ಮ