ಆಹ! ಈ ಮೋಹಗಳೊ ನೇಹಗಳೊ ದಾಹಗಳೊ

ಊಹಿಪೆಯ ಸೃಷ್ಟಿಯಲಿ ಹೃದಯಮಿಹುದೆಂದು ?

ಹೋಹೊ ಹಾಹಾ ಎಂದು ನಮ್ಮ ಬಾಯ್ಬಿಡಿಸುವುದೆ

ಈ ಹರಿಬದೊಳಗುಟ್ಟೊ? - ಮಂಕುತಿಮ್ಮ