ಪಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ

ಖಂಡಿತದಿ ಸೇತುವೆಯ ಕಟ್ಟುವೊಡೆ ನೀವು

ಕಂಡಿಹಿರ ನರಹೃದಯದಾಳ ಸುಳಿ ಬಿರುಬುಗಳ?

ದಂಡವದನುಳಿದ ನುಡಿ - ಮಂಕುತಿಮ್ಮ