ಗಗನನೀಲಿಮೆಯೆನ್ನ ಕಣ್ಣೆ ಸೊಗವೀವಂತೆ

ಮುಗಿವ ತರಣಿಯ ರಕ್ತ ಹಿತವೆನಿಸದೇಕೋ!

ಸೊಗದ ಮೂಲವದೆಲ್ಲಿ ನೀಲದೊಳೊ ಕೆಂಪಿನೊಳೊ

ಬಗೆವೆನ್ನ ಮನಸಿನೊಳೊ? - ಮಂಕುತಿಮ್ಮ