ಕುರುಡನಿನಚಂದ್ರರನು ಕಣ್ಣಿಂದ ಕಾಣುವನೆ?

ಅರಿಯುವಂ ಸೋಂಕಿಂದೆ ಬಿಸಿಲುತಣಿವುಗಳ

ನರನುಮಂತೆಯೆ ಮನಸಿನನುಭವದಿ ಕಾಣುವನು

ಪರಸತ್ತ್ವಮಹಿಮೆಯನು - ಮಂಕುತಿಮ್ಮ