ಭೌತವಿಜ್ಞಾನಿ ರವಿತಾರೆಧರೆಗಳ ಚಲನ

ರೀತಿ ವೇಗವನಳೆದು ಶಕ್ತಿಗಳ ಗುಣಿಪನ್

ಪ್ರೀತಿರೋಷಗಳನವನಳೆವನೇನ್ ? ಅವ್ಯಕ್ತ

ಚೇತನವನರಿವನೇಂ? - ಮಂಕುತಿಮ್ಮ