ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಿಲ್ಲಿ

ಎಲ್ಲಿ ಪರಿಪೂರಣವೊ ಅದನರಿಯುವನಕ

ಸೊಲ್ಲಿಸುವರಾರು ಸೃಷ್ಟಿಯ ಪೇಟಿಯೊಳಗುಟ್ಟ?

ಎಲ್ಲ ಬಾಳು ರಹಸ್ಯ - ಮಂಕುತಿಮ್ಮ