ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ
ಪರಿಕಿಸುತೆ ಮುಕುರದಲಿ ಸೊಗಸುಗಳ ಪರಿಯ
ಮರೆತೆಲ್ಲವನು ವಿಲಸಿಪಂತೆ ತಾಂ ವಿಶ್ವದಲಿ
ಮೆರೆಯುವನು ಪರಬೊಮ್ಮ - ಮಂಕುತಿಮ್ಮ