ಆದಿದಿವಸವದಾವುದೆಂದೆಂದುಮಿಹ ಜಗಕೆ?
ಬೋಧನೆಯ ಸುಲಭತೆಗೆ ಸೃಷ್ಟಿಲಯಕಥನ
ಪಾದಶಿರಗಳ ಕೂರ್ಮ ಚಾಚಿಕೊಂಡಿರೆ ಸೃಷ್ಟಿ
ಸೇದಿಕೊಂಡರೆ ಲಯವೊ - ಮಂಕುತಿಮ್ಮ