ಸತ್ಯವೆಂಬುದದೇನು ಬ್ರಹ್ಮಾಂಡ ತಾಂಡವದಿ?
ನೃತ್ಯವೇ ಸತ್ಯವಲ ಕಡಲಲೆಯ ಬಾಳೊಳ್
ಮಿಥ್ಯೆಯೆಂಬುದೆ ಮಿಥ್ಯೆ; ಜೀವನಾಟಕ ಸತ್ಯ
ಕೃತ್ಯವಿದು ಬೊಮ್ಮನದು - ಮಂಕುತಿಮ್ಮ