ವಿಧಾನಸೌಧ - ಪಾರ್ಲಿಮೆಂಟು, ಅಧಿಕಾರಶಾಹಿ, ವ್ಯಾಪಾರಿಗಳು, ಮಧ್ಯವರ್ತಿಗಳು, ವೃತ್ತಿನಿರತರು, ಅಷ್ಟೇ ಏಕೆ,
ಇಡೀ ವ್ಯವಸ್ಥೆಯೇ ಬುಡಮೇಲಾಗಿ " ರೈತನೇ ಅನ್ನದಾತ. ನಮ್ಮ ಬದುಕಿನ ಜೀವ ದ್ರವ್ಯ ರೈತನೇ " ಎಂದು ಕೂಗಿ ಹೇಳುತ್ತಾ ಎಲ್ಲರೂ ಆತನ ಬಗ್ಗೆ ಘನತೆಯಿಂದ ನಡೆದುಕೊಳ್ಳುವ ದಿನಗಳು ಬರುತ್ತದೆ.
ಮುಖ್ಯವಾಗಿ ರೈತನನ್ನು ಹಾಸ್ಯಾಸ್ಪದವಾಗಿ ನೋಡುವ ಮನರಂಜನಾ ಉದ್ಯಮ, ರಾಜಕೀಯ ವ್ಯವಸ್ಥೆ, ವಾಣಿಜ್ಯೋಧ್ಯಮ, ಮಧ್ಯವರ್ತಿ ವೃತ್ತಿಯಲ್ಲಿರುವವರು ತಾವೇ ಹಾಸ್ಯಾಸ್ಪದವಾಗುತ್ತಾರೆ.. ಆ ಹೊಸ ನಾಯಕತ್ವ ಮತ್ತು ಚಿಂತನೆಯ ತಂಗಾಳಿಗಾಗಿ ಕಾಯುತ್ತಿರುವ… ಹಾಗಾಗಲಿ ಎಂದು ಆಶಿಸುತ್ತಾ ...
ನನ್ನ ಪ್ರೀತಿಯ ಗೆಳೆಯ ಗೆಳತಿಯರೇ......
ನಿಂಬೆ ಹಣ್ಣು ಮಾರುವ ಅಜ್ಜಿಯ ಬಳಿ ಚೌಕಾಸಿ ಮಾಡದಿರಿ,
ಸೊಪ್ಪಿನ ಅಜ್ಜನ ಬಳಿ ಕೊಸರಾಡದಿರಿ,
ಕಡಲೆಕಾಯಿ ಮಾರುವವರ ಹತ್ತಿರ ಜಗಳವಾಡದಿರಿ,
ಹಣ್ಣಿನವನ ಹತ್ತಿರ ಪೌರುಷ ತೋರದಿರಿ,
ಎಳನೀರಿನವರ ಬಳಿ ಜುಗ್ಗುತನದಿಂದ ವರ್ತಿಸದಿರಿ,
ಹೂವಿನವರ ಹತ್ತಿರ ನಿಮ್ಮೆಲ್ಲಾ ಜಿಪುಣತನ ಖರ್ಚುಮಾಡದಿರಿ,
ಗೊತ್ತೇ ನಿಮಗೆ ಹಣ್ಣು ತರಕಾರಿ ಸೊಪ್ಪು ಬೇಳೆಕಾಳುಗಳು ಭತ್ತ ಬೆಳೆಯುವವರ ಕಷ್ಟ,
ಗೊತ್ತೇ ನಿಮಗೆ ಅವು ಬೆಳೆಯಲು ಎಷ್ಟು ದಿನ ಬೇಕೆಂದು,
ಗೊತ್ತೇ ನಿಮಗೆ ಅದು ಫಸಲಾಗಲು ಎಷ್ಟು ಜನರು ಶ್ರಮಪಡಬೇಕೆಂದು,
ಗೊತ್ತೇ ನಿಮಗೆ ಅದಕ್ಕೆ ತಗಲುವ ಖರ್ಚು ಎಷ್ಟೆಂದು,
ಗೊತ್ತೇ ನಿಮಗೆ ಅದರ ಆರೈಕೆ ಎಷ್ಟು ಕಷ್ಟವೆಂದು,
ಗೊತ್ತೇ ನಿಮಗೆ ಅದರ ಕಟಾವಿನಲ್ಲಿ ಸುರಿಯುವ ಬೆವರು ಎಷ್ಟೆಂದು,
ಗೊತ್ತೇ ನಿಮಗೆ ಅದರ ಸಾಗಾಣಿಕೆಯ ಕರ್ಮಕಾಂಡ?
ಗೊತ್ತೇ ನಿಮಗೆ ಅದರಲ್ಲಿ ಆಗುವ ಸೋರಿಕೆಯ ನಷ್ಟ ಎಷ್ಟೆಂದು?
ಗೊತ್ತೇ ನಿಮಗೆ ಇಷ್ಟಾದರೂ ಅದಕ್ಕೆ ಸಿಗುವ ಪ್ರತಿಫಲ ಎಷ್ಟೆಂದು?
ನಿಮ್ಮ ಮನೆಯಲ್ಲಿ ಬೇಯುವ ಅನ್ನ ಕಂಪ್ಯೂಟರ್ ನಲ್ಲಿ ತಯಾರಾದದ್ದಲ್ಲ.
ನೀವು ಊಟ ಮಾಡುವ ತರಕಾರಿ ಇಂಟರ್ನೆಟ್ ನಲ್ಲಿ ಬೆಳೆದದ್ದಲ್ಲ.
ಅದು ರೈತರ ಬೆವರ ಹನಿಗಳಿಂದ ಬಸಿದದ್ದು.
ತಾಕತಿದ್ದರೆ Pizza - Burger ಹೋಟೆಲ್ ಗಳಲ್ಲಿ ಚೌಕಾಸಿ ಮಾಡಿ,
ಧೈರ್ಯವಿದ್ದರೆ Shopping mall ಗಳಲ್ಲಿ ಕೊಸರಾಡಿ,
ಶಕ್ತಿಯಿದ್ದರೆ Multiplex theater ಟಿಕೆಟ್ ಕೌಂಟರ್ ನಲ್ಲಿ ಜಗಳವಾಡಿ,
ಸದ್ಯಕ್ಕೆ ಸಾಮಾನ್ಯರಿಗೆ ಊಟಕ್ಕೇನು ಕೊರತೆ ಇಲ್ಲ,
ರಾಜಕಾರಣಿಗಳಿಗೆ ಓಟು ಕೊಳ್ಳಲು ಸಮಸ್ಯೆ ಇಲ್ಲ,
ಉದ್ಯಮಿಗಳಿಗೆ ವ್ಯಾಪಾರಕ್ಕೇನು ತೊಂದರೆ ಇಲ್ಲ,
ಡಾಕ್ಟರು, ಆಕ್ಟರು, ಮೇಷ್ಟರು, ಲಾಯರು, ಆಡಿಟರು, ಬ್ರೋಕರು, ಆಫೀಸರು ಯಾರಿಗೂ ತೊಂದರೆ ಏನೂ ಇಲ್ಲ....
ನೋಡೋಣ ಮುಂದೆ..
ರೈತರೆಲ್ಲ ವಿಷ ಕುಡಿದು ಸತ್ತ ಮೇಲೆ, ಊಟಕ್ಕೆ ತೊಂದರೆಯಾದ ಮೇಲೆ ರೈತರನ್ನು ನೆನಪಿಸಿಕೊಳ್ಳೋಣ.
ಅಲ್ಲಿಯವರೆಗೂ ಚೆನ್ನಾಗಿ ಊಟ ಮಾಡ್ಕೊಂಡು ಎಲ್ರೂ ಆರಾಮವಾಗಿರಿ.
ಬೆಳಗಿನ ಬಿಸಿ ಬಿಸಿ ಕಾಫಿ ಟೀ,
ನಂತರದ ಉಪ್ಪಿಟ್ಟು ಚಿತ್ರಾನ್ನ ಇಡ್ಲಿ ವಡೆ ದೋಸೆ,ಮಧ್ಯಾಹ್ನದ ರೊಟ್ಟಿ ಚಪಾತಿ ಮುದ್ದೆ ಅನ್ನ, ಸಂಜೆಯ ಪಾನಿಪುರಿ, ಮಸಾಲಾ ಪುರಿ, ಬೇಲ್ ಪುರಿ, ವಡಾ ಪಾವ್, ಪಾವ್ ಬಾಜಿ, ರಾತ್ರಿಯ ಚಿಕನ್ ಮಟನ್ ರೋಟಿ, ದಾಲ್ ಪಾಲಾಕ್, ದೋಕ್ಲಾ, ಕಿಚಡಿ ಎಲ್ಲಾ ದುಡ್ಡು ಕೊಟ್ಟರೆ ಸಿಗುತ್ತದೆ. ಮನೆಗೇ ತಂದು ಕೊಡುತ್ತಾರೆ. ಫಾದರ್ಸ್ ಡೇ, ಮದರ್ಸ್ ಡೇ, ಚಿಲ್ಡ್ರನ್ಸ್ ಡೇ, ವ್ಯಾಲೆಂಟೈನ್ ಡೇ, ಆ ಡೇ ಈ ಡೇ....ಎಲ್ಲಾ ಸಂಭ್ರಮದಿಂದ ಆಚರಿಸಿ. ನೋಡೋಣ ಗಾಡಿ ಹೀಗೆ ಎಷ್ಟು ದೂರ ಹೋಗುತ್ತೆ ಅಂತ.
ರೈತರ ಬೆವರಿನ ಘಮಲು,
ಶ್ರಮದ ನಿಟ್ಟುಸಿರು,
ನಿರಾಸೆಯ ಆಕ್ರಂದನ,
ನೋವಿನ ಕೂಗು,
ಈ ಸಮಾಜಕ್ಕೆ ತಟ್ಟುವವರೆಗೂ..
ಮನುಷ್ಯ ಪ್ರಾಣಿಗಳ ಸುಖಕ್ಕೆ ತೊಂದರೆಯೇನು ಇಲ್ಲ.
-ವಿವೇಕಾನಂದ. ಎಚ್. ಕೆ., ಬೆಂಗಳೂರು
ಚಿತ್ರ ಕೃಪೆ: ಇಂಟರ್ನೆಟ್ ತಾಣ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!