ಕನ್ನಡ ಚಂದ್ರ ಪ್ರಶಸ್ತಿ ಪ್ರದಾನ ಸಮಿತಿ ವತಿಯಿಂದ ಲೇಖಕ, ಚಿಂತಕ ರಾ. ನಂ ಚಂದ್ರಶೇಖರ ಅವರ 75ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಜುಲೈ 21 (ಮಂಗಳವಾರ) ಸಂಜೆ 5.00 ಗಂಟೆಗೆ ʻಕನ್ನಡ ಚಂದ್ರʼ ಪ್ರಶಸ್ತಿ ಪ್ರದಾನ ಹಾಗೂ ʻಅಕ್ಷರ ಸಾಕ್ಷ್ಯʼ ಕೃತಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಹಾಗೂ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಟಿ. ಎಸ್ ನಾಗಾಭರಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬಾಬು ಕೃಷ್ಣಮೂರ್ತಿ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ.
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!