ಮಂಕುತಿಮ್ಮನ ಕಗ್ಗ ೮೦
ಚೀಟಿಯಾಟದ ಬಿನದಿ ತಾನೊರ್ವನಿರ್ವರವೊಲ್ ಆಟವಾಡುತಲಿ ತನ್ನೊರ್ತನವ ಮರೆವಾ ಮಾಟದಲಿ ಬೊಮ್ಮನುಂ ತನ್ನೇಕತೆಯ ಜೀವ ಪಾಟಿಯಲಿ ಮರೆತಿಹನು - ಮಂಕುತಿಮ್ಮ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shashiag
ಚೀಟಿಯಾಟದ ಬಿನದಿ ತಾನೊರ್ವನಿರ್ವರವೊಲ್ ಆಟವಾಡುತಲಿ ತನ್ನೊರ್ತನವ ಮರೆವಾ ಮಾಟದಲಿ ಬೊಮ್ಮನುಂ ತನ್ನೇಕತೆಯ ಜೀವ ಪಾಟಿಯಲಿ ಮರೆತಿಹನು - ಮಂಕುತಿಮ್ಮ
ಬರೆವ ಹಲಗೆಯನೊಡೆದು ಬಾಲಕನು ತಾನದನು ಮರಳಿ ಜೋಡಿಪೆನೆನ್ನು ತಾಯಾಸಗೊಳುತ ಸರಿಚೌಕಗೈವಾಟದಲಿ ಜಗವ ಮರೆವಂತೆಪರಬೊಮ್ಮ ಸೃಷ್ಟಿಯಲಿ - ಮಂಕುತಿಮ್ಮ
ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ ಪರಿಕಿಸುತೆ ಮುಕುರದಲಿ ಸೊಗಸುಗಳ ಪರಿಯ ಮರೆತೆಲ್ಲವನು ವಿಲಸಿಪಂತೆ ತಾಂ ವಿಶ್ವದಲಿ ಮೆರೆಯುವನು ಪರಬೊಮ್ಮ - ಮಂಕುತಿಮ್ಮ
ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ ರನ್ನವೋ ಬ್ರಹ್ಮ :ನೋಡುವನು - ನಿಜಪಿಂಛ ವರ್ಣದೆಣಿಕೆಯಲಿ ತನ್ನನೆ ಮರೆತು ನವಿಲವೊಲು ತನ್ಮಯನೊ ಸೃಯಲ್ಲಿ - ಮಂಕುತಿಮ್ಮ
ಬಹುವಾಗಲೆಳಸಿ ತಾನೊಬ್ಬಂಟಿ ಬೊಮ್ಮ ನಿಜ ಮಹಿಮೆಯಿಂ ಸೃಜಿಸಿ ವಿಶ್ವವನಲ್ಲಿ ನೆಲಸಿ ವಹಿಸಿ ಜೀವತೆಯ ಮಾಯೆಯ ಸರಸವಿರಸದಲಿ ವಿಹರಿಪನು ನಿರ್ಲಿಪ್ತ! - ಮಂಕುತಿಮ್ಮ
ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ ವಿಸ್ತರಿಸುವಂದದಿ ಸೃಷ್ಟಿ ತನ್ನ ಮೂಲವನು ಮರೆಮಾಚಿ ತಾನೆ ಮರೆಯುತ್ತಿಹುದು ಕಣ್ಗಳಿಗೆ ನೊರೆ ಸೃಷ್ಟಿ ಪಾಲ್ ಬ್ರಹ್ಮ - ಮಂಕುತಿಮ್ಮ
ಸುಮ್ಮ ನೊಬ್ಬಂಟಿಯೆಂತಿಹುದು? ಬೇಸರವಹುದು ಹೊಮ್ಮುವೆನು ಕೋಟಿರೂಪದಲಿ ನಾನೆಂದು ಬೊಮ್ಮನೆಳಸಿದನಂತೆ ಆಯೆಳಸಿಕೆಯೆ ಮಾಯೆ ನಮ್ಮಿರವು ಮಾಯೆಯಲಿ - ಮಂಕುತಿಮ್ಮ
ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ ಅಂಟಿಲ್ಲವೆನೆಗಿದರೊಳೆನ್ನದಿರದೆಂದುಂ ಒಂಟಿ ನೀನೊಳಜಗಕೆ ಭಂಟ ಹೊರಜಗಕಾಗಿ ಒಂಟಿಸಿಕೊ ಜೀವನವ - ಮಂಕುತಿಮ್ಮ
ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು ಆವಾನ ಬಂಧುತೆಯ ಜಡೆಯ ಬಿಡಿಸುವನು? ಜೀವ ಜೀವಕೆ ನಂಟು ಜಡ ಚೇತನಕೆ ನಂಟು ಆವುದದಕಂಟಿರದು? - ಮಂಕುತಿಮ್ಮ
ತರಣಿ ಕಿರಣದ ನಂಟು ಗಗನ ಸಲಿಲದ ನಂತು ಧರಣಿ ಚಲನೆಯ ನಂಟು ಮರುತನೊಳ್ನಂಟು ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ ಕಿರಿದು ಪಿರಿದೊಂದಂಟು - ಮಂಕುತಿಮ್ಮ
ಭೂವಿಷಯದಲಿ ಪುದಿದ ರಸವಾಸನೆಗಳೆಲ್ಲ ಆವಿಯಾಗೇಳ್ದು ಮುಗಿಲಾಗಿ ಮಳೆಗರೆದು ಬಾವಿಗೊಟೆಯನಿತ್ತು ನರರೊಡಲ ಸೇರುವುದು ದೈವ ರಸತಂತ್ರವಿದು - ಮಂಕುತಿಮ್ಮ
ಹೆಸರನರಿಯದ ಸಸಿಯೊಳಿರವೆ ರಸಗಂಧಗಳು? ಬಿಸಿಲದನು ಪಕ್ವ ಗೊಳಿಸುತೆ ಬಿಡಿಸದಿಹುದೆ? ಪಸರಿಸದೆ ಗಾಳಿಯದನೊಯ್ದು ದಿಸೆದಿಸೆಗಳೊಳು? ಉಸಿರುತಿಹೆವದ ನಾವು - ಮಂಕುತಿಮ್ಮ