ಮಂಕುತಿಮ್ಮನ ಕಗ್ಗ
ಮೇಲಿಂದ ನಕ್ಷತ್ರಜಯಘೋಷ ಸುತ್ತಣಿಂ ಭೊಲೋಕದರಚು ಕೆಳಗಿಂ ಮೂಳೆಯಳುವು ಕೇಳಬರುತೀ ಮೂರುಕೂಗೆನ್ನ ಹೃದಯಲಿ ಮೇಳಯಿಸುತಿದೆ ಸಂತೆ - ಮಂಕುತಿಮ್ಮ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shashiag
ಮೇಲಿಂದ ನಕ್ಷತ್ರಜಯಘೋಷ ಸುತ್ತಣಿಂ ಭೊಲೋಕದರಚು ಕೆಳಗಿಂ ಮೂಳೆಯಳುವು ಕೇಳಬರುತೀ ಮೂರುಕೂಗೆನ್ನ ಹೃದಯಲಿ ಮೇಳಯಿಸುತಿದೆ ಸಂತೆ - ಮಂಕುತಿಮ್ಮ
ಕುರುಡನಿನಚಂದ್ರರನು ಕಣ್ಣಿಂದ ಕಾಣುವನೆ? ಅರಿಯುವಂ ಸೋಂಕಿಂದೆ ಬಿಸಿಲುತಣಿವುಗಳ ನರನುಮಂತೆಯೆ ಮನಸಿನನುಭವದಿ ಕಾಣುವನು ಪರಸತ್ತ್ವಮಹಿಮೆಯನು - ಮಂಕುತಿಮ್ಮ
ಫಲವಿಲ್ಲ ಕಾರ್ಯಕಾರಣವಾದದಿಂ ತತ್ತ್ವ ಸಿಲುಕದೆಮ್ಮಯ ತರ್ಕಕರ್ಕಶಾಂಕುಶಕೆ ಸುಳಿವುದಾಗೀಗಳದು ಸೂಕ್ಶ್ಮಾನುಭವಗಳಲಿ ತಿಳಿಮನದೆ ನೋಳ್ಪರ್ಗ - ಮಂಕುತಿಮ್ಮ
ತೈಣಕೆ ಹಸಿರೆಲ್ಲಿಯದು? ಬೇರಿನ್ಸ್ದೆ? ಮಣ್ಣಿನದೆ? ದಿನಪನದೆ? ಚಂದ್ರನದೆ? ನೀರಿನದೆ? ನಿನದೆ? ತಣಿತಣಿವ ನಿನ್ನ ಕಣ್ಣಿನ ಪುಣ್ಯವೋ? ನೋಡು ಗುಣಕೆ ಕಾರಣವೊಂದೆ ? - ಮಂಕುತಿಮ್ಮ
ಗಗನನೀಲಿಮೆಯೆನ್ನ ಕಣ್ಣೆ ಸೊಗವೀವಂತೆ ಮುಗಿವ ತರಣಿಯ ರಕ್ತ ಹಿತವೆನಿಸದೇಕೋ! ಸೊಗದ ಮೂಲವದೆಲ್ಲಿ ನೀಲದೊಳೊ ಕೆಂಪಿನೊಳೊ ಬಗೆವೆನ್ನ ಮನಸಿನೊಳೊ? - ಮಂಕುತಿಮ್ಮ
ಸೆಳೆಯುತಿರುವುದದೊಂದು ಹೊರಬೆಡಗಿನೆಳೆಗಳೆ ನ್ನೊಳಗಿನಸುವೆಲ್ಲವನು ಕಟ್ಟಿನಿಂ ಬಿಗಿದು ಎಳೆದಾಟವೇಂ ಣಾಕರ್ಷಣೆಯೋ? ಸೃಷ್ಠಿವಿಧಿ ಯೊಳತಂತ್ರವೋ? ನೋಡು - ಮಂಕುತಿಮ್ಮ
ಮನೆಯಲ್ಲಿ ಸತ್ಯಕ್ಕೆ? ಶ್ರುತಿ ತರ್ಕಮಾತ್ರದೊಳೆ? ಅನುಭವಮುಮದರೊಂದು ನೆಲೆಯಾಗದಿಹುದೇಂ ಮನುಜಹೃದಯಾಂಗಣದೊಳೆನಿತೆನಿತೊ ದನಿಯುದಿಸಿ ಅಣಕಿಪುವು ತರ್ಕವನು - ಮಂಕುತಿಮ್ಮ
ಪಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ ಖಂಡಿತದಿ ಸೇತುವೆಯ ಕಟ್ಟುವೊಡೆ ನೀವು ಕಂಡಿಹಿರ ನರಹೃದಯದಾಳ ಸುಳಿ ಬಿರುಬುಗಳ? ದಂಡವದನುಳಿದ ನುಡಿ - ಮಂಕುತಿಮ್ಮ
ಒಂದಿಹುದುಪಾಯವೋರೊರ್ವನರೆಗಣ್ಣುಗಳು ಮೊಂದೊಂದು ಸತ್ಯಾಂಶಕಿರಣಗಳ ಪಿಡಿದು ಒಂದುಗೂಡಿದೊಡ್ಡವರ್ಗಳರಿವನೆಲ್ಲವನಾಗ ಮುಂದು ಸಾಗುವೆವಿನಿತು - ಮಂಕುತಿಮ್ಮ
ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು? ಅರೆಬೆಳಕು ಧರೆಯೊಳೆಂದೂರಲಿ ಸುಖವೇನು? ಇವರು ಕಣ್ಣಿರುವ ಬೆಳಕಿನೊಳಾದನಿತ ನೋಡಿ ಪರಿಕಿಸಿದೊಡದು ಲಾಭ - ಮಂಕುತಿಮ್ಮ
ಇರಲಿ ಜೀವರಹಸ್ಯವರೆಪರದೆಯೊಳಗಡಗಿ ಅರಸಿ ವರಸುವರಾರು ಬೀದಿಬತ್ತಲಿಯ? ಅರಳಿಪುದಡಗಿರ್ಡೊಡಾಗ ನಮ್ಮದೆಗಣ್ಣ ಸುರಸತೆಯ ಕುತುಕದಿಂ - ಮಂಕುತಿಮ್ಮ
ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು ಮಂಕುವಿಡಿಸಲು ಸಾಕು ಮಣ್ಣುಂಡೆ ಕಣ್ಗೆ ಶಂಕೆಗೆಡೆಯಿರದು ಕತ್ತಲೆಯೆ ಜಗವನು ಕವಿಯೆ ಬೊಂಕುದೀವಿಗೆ ತಂಟೆ - ಮಂಕುತಿಮ್ಮ