ಮಂಕುತಿಮ್ಮನ ಕಗ್ಗ
ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? ಚಂಡಚತುರೋಪಾಯದಿಂದಲೇನಹುದು? ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು ಅಂಡಲೆತವಿದಕೇನೋ? - ಮಂಕುತಿಮ್ಮ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shashiag
ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? ಚಂಡಚತುರೋಪಾಯದಿಂದಲೇನಹುದು? ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು ಅಂಡಲೆತವಿದಕೇನೋ? - ಮಂಕುತಿಮ್ಮ
ಗಾಳಿ ಮಣ್ಣುಂಡೆಯೊಳಹೊಕ್ಕು ಹೊರಹೊರಳಲದು ಆಳೆನಿಪುದಂತಾಗದಿರೆ ಬರಿಯ ಹೆಂಟೆ ಬಾಳೇನು ಧೂಳು ಸುಳಿ, ಮರ ತಿಕ್ಕಿದುರಿಯ ಹೊಗೆ ಕ್ಪ್ವೇಳವೇನಮೃತವೇಂ? - ಮಂಕುತಿಮ್ಮ
ನದಿಯ ತೆರೆಯವೂಲುರುಳಿ ಹೊರಳುತಿರುವುದು ಜೀವ ಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲವದಕೆ ಬದುಕೇನು ಸಾವೇನು ಸೊದೆಯೇನು ವಿಷವೇನು? ಉದಕಬುದ್ಬುದವೆಲ್ಲ! - ಮಂಕುತಿಮ್ಮ
ತಳಮಳವದೇನಿಳೆಗೆ? ದೇವದನುಜರ್ ಮಥಿಸೆ ಜಳನಿಧಿಯೊಳಾದಂತೆ ಸುಧುಗೆ ಪೀಠಿಕೆಯೇಂ? ಹಾಳಾಹಳವ ಕುಡಿವ ಗಿರಿಶನಿದ್ದಿರ್ದೊಡೀ ಕಳವಳವದೇತಕೆಲೊ? - ಮಂಕುತಿಮ್ಮ
ಇಳೆಯ ಬಿಟ್ಟಿನ್ನು ಮೆತ್ತಲುಮೈದದ ಪ್ರೇತ ವಲೆವಂತೆ ಲೋಕ ತಲ್ಲಣಿಸುತಿಹುದಿಂದು ಹಳೆಧರ್ಮ ಸತ್ತಿಹುದು ಹೊಸಧರ್ಮ ಹುಟ್ಟಿಲ್ಲ ತಳಮಳಕೆ ಕಡೆಯೆಂದೊ? - ಮಂಕುತಿಮ್ಮ
ಹಳೆಯ ಭಕ್ತಿಶ್ರದ್ಧೆಯಳಿಸಿಹೋಗಿವೆ ಮಾಸಿ ಸುಳಿದಿಲ್ಲವಾವ ಹೊಸದರ್ಶನದ ಹೊಳಪುಂ ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ ತಳಮಳಿಸುತಿದೆ ಲೋಕ - ಮಂಕುತಿಮ್ಮ
ಒಂದೆ ಗಗನವ ಕಾಣುತೊಂದೆ ನೆಲವನು ತುಳಿಯು ತೊಂದೆ ಧಾನ್ಯವನುಣ್ಣುತೊಂದೆ ನೀರ್ಗುಡಿದು ಒಂದೆ ಗಾಳಿಯನುಸಿರ್ವ ನರಜಾತಿಯೊಳಗೆಂತು ಬಂದುದೀ ವೈಷಮ್ಯ? - ಮಂಕುತಿಮ್ಮ
ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು?| ಧರಣಿಗನುದಿನದ ರಕ್ತಾಭಿಷೇಚನೆಯೆ? || ಕರವಾಲವನು ಪುಷ್ಪಸರವೆಂದು ಸೆಳೆದಾಡೆ | ಪರಿಮಳದ ಸೂಸುವುದೇ? - ಮಂಕುತಿಮ್ಮ ||
ಮಾನವರೊ ದಾನವರೊ ಭೂಮಾತೆಯನು ತಣಿಸೆ | ಶೋಣಿತವನೆರೆಯುವರು ಬಾಪ್ಷ ಸಲುವುದಿರೆ? || ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ | ಸೌನಿಕನ ಕಟ್ಟೆಯೇಂ? - ಮಂಕುತಿಮ್ಮ ||
ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ | ಮೃತ್ಯು ಕುಣಿಯುತಲಿಹನು ಕೇಕೆಹಾಕುತಲಿ || ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ|| ಎತ್ತಲಿದಕೆಲ್ಲ ಕಡ್ಲೆ? - ಮಂಕುತಿಮ್ಮ |
ಏನು ಪ್ರಪಂಚವಿದು! ಏನು ಧಾಳಾಧಾಳಿ! | ಏನದ್ಭುತಾಪಾರಶಕ್ತಿನಿರ್ಘಾತ! || ಮಾನವ ಗುರಿಯೇನು? ಬೆಲೆಯೇನು? ಮುಗಿವೇನು? | ಏನರ್ಥವಿದಕೆಲ್ಲ?- ಮಂಕುತಿಮ್ಮ ||
ಏನು ಭೈರವಲೀಲೆಯೀ ವಿಶ್ವವಿಭ್ರಮಣೆ!| ಏನು ಭೂತಗ್ರಾಮನರ್ತನೋನ್ಮಾದ! || ಏನಗ್ನಿ ಗೋಳಗಳು! ಏನಂತರಾಳಗಳು!| ಏನು ವಿಸ್ಮಯ ಸೃಷ್ಟಿ? - ಮಂಕುತಿಮ್ಮ |