ಮಂಕುತಿಮ್ಮನ ಕಗ್ಗ - 176
ಇಂಗಿತಜ್ಞಾನವಿಲ್ಲದ ಬಂಧುಪರಿವಾರಹಂಗಿಸುವ ಛಲವುಳ್ಳ ಸತಿಪುತ್ರಸಖರುಬಂಗಾರದಸಿ ಚುಚ್ಚೆ ಸಿಂಗರದ ಬೊಟ್ಟೆನುವಮಂಗಬುದ್ಧಿಯ ಜನರು - ಮಂಕುತಿಮ್ಮ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shashiag
ಇಂಗಿತಜ್ಞಾನವಿಲ್ಲದ ಬಂಧುಪರಿವಾರಹಂಗಿಸುವ ಛಲವುಳ್ಳ ಸತಿಪುತ್ರಸಖರುಬಂಗಾರದಸಿ ಚುಚ್ಚೆ ಸಿಂಗರದ ಬೊಟ್ಟೆನುವಮಂಗಬುದ್ಧಿಯ ಜನರು - ಮಂಕುತಿಮ್ಮ
ಕಾಂಕ್ಷೆಗಳ ಬೋಧಿಸುವ ಬಂಧುಸಖರುಪಕಾರಯಕ್ಷಿಯರು ಮ್ಯಾಕ್ ಬೆತನಿಗೆಸಗಿದುಪದೇಶಉತ್ಸಾಹವಿದ್ದೇನು? ವಾತ್ಸಲ್ಯವಿದ್ದೇನುಅಕ್ಷಿ ನಿರ್ಮಲವೇನೊ? - ಮಂಕುತಿಮ್ಮ
ತಂದೆಮಕ್ಕಳಿಗೆ ಹದಗೆಟ್ಟುದನು ಕಾಣೆಯಾಹೊಂದಿರುವರವರ್ ಅಹಂತೆಯು ಮೊಳೆಯುವನಕತಂದೆಯಾರ್ ಮಕ್ಕಳಾರ್ ನಾನೆಂಬುದೆದ್ದುನಿಲೆ?ಬಂಧ ಮುರಿವುದು ಬಳಿಕ - ಮಂಕುತಿಮ್ಮ
ಬಂಧುಬಳಗವುಮಂತಕನ ಚಮುವೊ,ಛದ್ಮಚಮುದಂದುಗದ ಬಾಗಿನಗಳವರ ನಲುಮೆಗಳುಕುಂದಿಪ್ಪುವಾತ್ಮನನವರ್ಗಳುಪಕಾರಗಳುಮಂದಿಗಾಗದಿರು ಬಲಿ - ಮಂಕುತಿಮ್ಮ
ಅರಿ ಮಿತ್ರ ಸತಿ ಪುತ್ರ ಬಂಧುಬಳಗವದೆಲ್ಲಕರುಮದವತಾರಗಳೊ,ಋಣಲತೆಯ ಚಿಗುರೋಕುರಿಯನಾಗಿಸಿ ನಿನ್ನ ಕಾಪಿಡುವ ಸಂಸಾರವುರಿಮಾರಿಯಾದೀತೊ - ಮಂಕುತಿಮ್ಮ
ಇಂದು ಮದುವೆಯ ಹಬ್ಬ ; ನಾಳೆ ವೈಕುಂಠ ತಿಥಿಇಂದು ಮೃಷ್ಟಾನ್ನ ಸುಖ ; ನಾಳೆ ಭಿಕ್ಷಾನ್ನಇಂದು ಬರಿಯುಪವಾಸ, ನಾಳೆ ಪಾರಣೆ-ಯಿಂತುಸಂದಿರುವುದನ್ನ ಋಣ - ಮಂಕುತಿಮ್ಮ
ಉಣುವುದುಡುವುದು ಪಡುವುದಾಡುವುದು ಮಾಡುವುದುಋಣಗಳೆಲ್ಲವು ಪೂರ್ವಸಂಚತಾಂಶಗಳುಹಣೆಯೊಳದು ಲಿಖಿತಮಿರೆಯುಂ ವಾಚಿಸುವನಿಲ್ಲಗೊಣಗಾಟವಳಿಸುವುದೆ? - ಮಂಕುತಿಮ್ಮ
ಋಣದ ಮೂಟೆಯ ಹೊರಿಸಿ,ಪೂರ್ವಾಜೀತದ ಹುರಿಯಕುಣಿಕೆಯಲಿ ನಿನ್ನ ಕೊರಳನು ಬಿಗಿದು ವಿಧಿಯುತೃಣದ ಕಡ್ಡಿಯ ಮುಂದೆ ಹಿಡಿದಾಶೆ ತೋರುತಿರೆಕುಣಿವ ಗರ್ದಭ ನೀನು - ಮಂಕುತಿಮ್ಮ
ಅನುಬಂಧ ಜೀವಜೀವಕೆ ಪುರಾಕೃತದಿಂದ ಮನದ ರಾಗದ್ವೇಷವಾಸನೆಗಳದರಿಂ ತನುಕಾಂತಿ ಮೋಹ ವಿಕೃತಿಗಳುಮಾ ತೊಡಕಿನವು ಕೊನೆಯಿರದ ಬಲೆಯೊ ಅದು - ಮಂಕುತಿಮ್ಮ
ಕ್ಷಿತಿಚಕ್ರ ರವಿಚಕ್ರ ಋತುಚಕ್ರಗಳಿಗಿಹುದು ಮಿತವೃತ್ತಿ ; ನರನಿಗಂತೆಯೆ ಕರ್ಮನಿಯತಿ ಕ್ಷಿತಿಕಂಪ ರಾಹುಕೇತುಭ್ರಮೆ ನರಪ್ರಗತಿ ಅತಿಚರಿತೆ ಪ್ರಕೃತಿಯಲಿ - ಮಂಕುತಿಮ್ಮ
ಹುಳು ಹುಟ್ಟಿ ಸಾಯುತಿರೆ, ನೆಲ ಸವೆದು ಕರಗುತಿರೆ ಕಡಲೊಳೆತ್ತಲೊ ಹೊಸ ದ್ವೀಪವೇಳುವುದುಕಳೆಯುತೊಂದಿರಲಿಲ್ಲಿ, ಬೆಳೆವುದಿನ್ನೊಂದೆಲ್ಲೊಅಳಿವಿಲ್ಲ ವಿಶ್ವಕ್ಕೆ - ಮಂಕುತಿಮ್ಮ
ಹೊಸಹೊಸದು ತಾನಾಗುತಿರ್ದೊಡಂ ತನ್ನಯ ಪ್ರಸವ ಪ್ರವಾಹ ಭೂಮಿಗಳ ಹಳೆತನದಿಂ ನಸುಸೋಂಕು ವಾಸನೆಯ ಪೊನಲೊಂದಬೇಕಲ್ತೆ?ಹೊಸದು ಹಳದಾಗದೇ - ಮಂಕುತಿಮ್ಮ