ಮಂಕುತಿಮ್ಮನ ಕಗ್ಗ 164
ಹಳೆಯ ಮಲೆ ಹಳೆಯ ನೆಲವಾದೊಡೆಯುಮೊರತೆ ಮಳೆ ಹೊಳೆನೀರನಾವಗಂ ಪೊಸದಾಗಿಸುವವೊಲ್ ಹಳೆಯ ಕರ್ಮವ ಹೊಸದು ಕೊಚ್ಚಿ ಪೌರುಷನದಿಯ ಬೆಳೆಯಿಪುದು ನವತೆಯಲಿ - ಮಂಕುತಿಮ್ಮ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shashiag
ಹಳೆಯ ಮಲೆ ಹಳೆಯ ನೆಲವಾದೊಡೆಯುಮೊರತೆ ಮಳೆ ಹೊಳೆನೀರನಾವಗಂ ಪೊಸದಾಗಿಸುವವೊಲ್ ಹಳೆಯ ಕರ್ಮವ ಹೊಸದು ಕೊಚ್ಚಿ ಪೌರುಷನದಿಯ ಬೆಳೆಯಿಪುದು ನವತೆಯಲಿ - ಮಂಕುತಿಮ್ಮ
ಮಾನುಷ್ಯಚರಿತೆಯಚ್ಚಿನ್ನವಾಹಿನಿ ಸಾಗ ಲಾನುಪೂರ್ವ್ಯದ ಕರ್ಮಋಣಶೇಷವಿನಿತುತಾನಿರಲೆಬೇಕಲ್ತೆ ಪೌರುಷಸ್ಪರ್ಧನೆಗೆ ಆನೆಗಂಕುಶದಂತೆ - ಮಂಕುತಿಮ್ಮ
ಟಗರೆರಡ ಬೆಳೆಸಿ ಕೊಬ್ಬಿಸಿ ಕೆಣಕಿ ಹುರಿಗೊಳಿಸಿ ಜಗಳವಾಡಿಸಿ ದೈವಜೀವಗಳ ಪೆಸರಿಂ ನಗುತಲಿರುವನು ನೋಡಿ ಪರಬೊಮ್ಮ ನೇಂ ಬಿನದಿ ಬಿಗಿಯದಿರು ನೀಂ ಬೀಗಿ - ಮಂಕುತಿಮ್ಮ
ವಿಧಿಯ ಹೊರೆಗಳನು ತಪ್ಪಿಸಿಕೊಳ್ಳುವನೆಲ್ಲಿ ಹನು? ಬೆದರಿಕೆಯನದರಿಂದ ನೀಗಿಪನು ಸಖನು ಎದೆಯನುಕ್ಕಾಗಿಸಾನಿಸು ಬೆನ್ನ, ತುಟಿಯ ಬಿಗಿ ವಿಧಿಯಗಸ, ನೀಂ ಕತ್ತೆ - ಮಂಕುತಿಮ್ಮ
ಆವ ಬೇಳೆಯದಾವ ನೀರಿನಲಿ ಬೇಯುವುದೊಆವ ಜೀವದ ಪಾಕವಾವ ತಾಪದಿನೋಆ ವಿವರವನು ಕಾಣದಾಕ್ಷೇಪಣೆಯದೇನು?ದೈವಗುಟ್ಟದು ತಿಳಿಯೆ - ಮಂಕುತಿಮ್ಮ
ತಾಪಿಸುತೆ ತಣಿಯಿಸುತೆ ಕುಲುಕಿಸುತೆ ಋತುವೈದ್ಯ ಭೂಪುಟದಿ ಜೀವರಸಗಳ ಪಚಿಸುವಂತೆ ಪಾಪಿಯಂ ಪ್ರೋತ್ಸಹಿಸಿ ಸುಕೃತಿಯ ಪರೀಕ್ಷಿಸುತ ವೇಪಿಪನು ವಿಧಿ ನಮ್ಮ - ಮಂಕುತಿಮ್ಮ
ಕರವೆರಡದೃಷ್ಟಕ್ಕೆ: ನರನ ಪೂರ್ವಕವೊಂದುಪೆರತೊಂದು ನವಸ್ಟ್ಟಿಷ್ಟಿಸತ್ತ್ವವಾ ಬೊಗಸೆಧರಿಸಿಹುದು ಮನುಜಜೀವಿತವನದರೊತ್ತಡದೆ ಪರಿದಾಟ ನಮಗೆಲ್ಲ - ಮಂಕುತಿಮ್ಮ
ಪರಬೊಮ್ಮನಾ ವಿಧಿಯ ನೇಮಿಸಿಹುದೇತಕೆಲೆ ನರಜಾತಿ ಸಾನುಭೂತಿಯ ಕಲಿಯಲೆಂದು ಪರರೆಂಬರಿಲ್ಲ ಆತ್ಮಾಂಶರೆಲ್ಲರೆನುತ್ತೆ ಬೆರೆ ನೀನು ವಿಶ್ವದಲಿ - ಮಂಕುತಿಮ್ಮ
ತೋಯಿಸುತ ಬೇಯಿಸುತ ಹೆಚ್ಚುತ್ತ ಕೊಚ್ಚುತ್ತ ಕಾಯಿಸುತಕರಿಸುತ್ತ ಹುರಿಯುತ್ತ ಸುಡುತ ಈಯವನಿಯೊಳೆಮ್ಮಯ ಬಾಳನಟ್ಟು ವಿಧಿ ಬಾಯ ಚಪ್ಪರಿಸುವನು - ಮಂಕುತಿಮ್ಮ
ಪೊಸರಸಂ ಬೇರಿಗನುದಿನಮೊದವಿ ಧರೆಯಿಂದ ಸಸಿಗೆ ಹೊಸತಳಿರ ತಲೆಯಲಿ ಮುಡಿಸುವಂತೆ ಹೊಸ ಸೃಷ್ಟಿಸತ್ತ್ವಮೆತ್ತಣಿನೊ ಬರುತನುದಿನಂ ಪೊಸತಾಗಿಪುದು ಜಗವ - ಮಂಕುತಿಮ್ಮ
ಪ್ರಾರಬ್ಧಕರ್ಮಮುಂ ದೈವಿಕದ ಲೀಲೆಯುಂ ತೋರುವುವದೃಷ್ಟವಿಧಿಯೆಂಬ ಪೆಸರುಗಳಿಂ ಆರುಮಳೆವವರಿಲ್ಲವವುಗಳಾವೇಗಗಳಪೌರುಷವು ನವಸತ್ತ್ವ - ಮಂಕುತಿಮ್ಮ
ಪುಣ್ಯ ಪಾಪ ಋಣಾನುಬಂಧ ವಾಸನೆಗಳಿವು ಜನ್ಮಾಂತರದ ಕರ್ಮಶೇಷದಂಶಗಳು ಎಣ್ಣಿಕೆಗೆ ಸಿಲುಕದಾಕಸ್ಮಿಕ ಯದೃಚ್ಛೆಗಳು ಸನ್ನಿಹಿತ ದೈವಿಕದೆ - ಮಂಕುತಿಮ್ಮ