ಮಂಕುತಿಮ್ಮನ ಕಗ್ಗ 128
ಹೊರಗಾವುದೊಳಗಾವಿದೀ ಸೃಷ್ಟಿಚಕ್ರದಲಿ ಎರಡನೊಂದಾಗಿಪುದು ಹರಿವ ನಮ್ಮುಸಿರು ಇರುವುದುಳಿದಿನಿತು ಹೊರಗಾಳಿ ಯೋಗಿಗಳೊಳಂ ಬರಿ ಸುಷಿರಪಿಂಡ ಜಗ - ಮಂಕುತಿಮ್ಮ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
shashiag
ಹೊರಗಾವುದೊಳಗಾವಿದೀ ಸೃಷ್ಟಿಚಕ್ರದಲಿ ಎರಡನೊಂದಾಗಿಪುದು ಹರಿವ ನಮ್ಮುಸಿರು ಇರುವುದುಳಿದಿನಿತು ಹೊರಗಾಳಿ ಯೋಗಿಗಳೊಳಂ ಬರಿ ಸುಷಿರಪಿಂಡ ಜಗ - ಮಂಕುತಿಮ್ಮ
ಶಿವಸೌಖ್ಯಸೌಂದರ್ಯಗಳ ಪೂರ್ಣರವಿ ಬೊಮ್ಮ ಭುವನಜೀವನಜಲಧಿಯೂರ್ಮಿಕೋಟಿಯಲಿ ಛವಿಕೋಟಿಯೆರಚಲ್ ಪ್ರತಿಚ್ಛಾಯೆ ವಿಲಸಿಪುದುಸವಿ ನಮ್ಮದದರ ಕಣ - ಮಂಕುತಿಮ್ಮ
ಒಳಿತೆಂದು ಸೊಗಸೆಂದು ಜಗವು ಮೆಚ್ಚುವುದೆಲ್ಲ ಕಲೆ ಕಣಂಗಳು ಮಾತ್ರ ಪೂರ್ಣಂಗಳಲ್ಲ ನಲಿವು ಚಲುವುಗಳ ಪರಿಪೂರ್ಣ ಮೂಲಾಕೃತಿಯೆ ಪರಬೊಮ್ಮನೆನ್ನುವರು - ಮಂಕುತಿಮ್ಮ
ಸಚ್ಚಿದಾನಂದಂಗಳಾತ್ಮ ಸ್ವಭಾವ ರಸ ಬಚ್ಚಿಡುವುದದನು ಜೀವಿತೆಯ ಮಾಯಿಕತೆ ಇಕ್ಷುವೊಲ್ ಜೀವ ಗಾಣದವೋಲ್ ಜಗನ್ಮಾಯೆ ನಿಚ್ಚವಿಳೆಯಾಲೆಮನೆ - ಮಂಕುತಿಮ್ಮ
ಮೌನದೊಳೊ ಮಾತಿನೊಳೊ ಹಾಸ್ಯದೊಳೊ ಹಾಡಿನೊಳೊ ಮಾನವಂ ಪ್ರಣಯದೊಳೊ ವೀರ ವಿಜಯದೊಳೋ ಏನೊ ಎಂತೋ ಸಮಾಧಾನಗಳನರಸುತಿಹ ನಾನಂದವಾತ್ಮಗುಣ - ಮಂಕುತಿಮ್ಮ
ಬನ್ನಬವಣೆಗಳ ತಾನೆನಿತೆನಿತು ಪಟ್ಟಿರೆಯು ಮಿನ್ನೂಮ್ಮೆ ಮತ್ತೊಮ್ಮೆ ಹೊಸ ಸಾಹಸಗಳಿಂ ಸನ್ನಹಿಸುವಂ ಸುಮ್ಮನಿರಲೊಲದೆ ಮಾನವನು ಚಿನ್ನಯತೆಯಾತ್ಮಗುಣ - ಮಂಕುತಿಮ್ಮ
ಜನಿಸಿದುದು ಮೃತಿಯನೆಳಸದೆ ಕುಲವ ಬೆಳಸುವುದು ಒಳಗಿದಂತಿರುವ ತೃಣಮೂಲ ಮೊಳೆಯುವುದು ಮನುಜರಳಿವರು ಮನುಜಸಂತಾನ ನಿಂತಿಹುದು ಅಣಗದಾತ್ಮದ ಸತ್ತ್ವ - ಮಂಕುತಿಮ್ಮ
ತನುವೇನು? ಮನುವೇನು? ಪರಮಾಣು ಸಂಧಾನ ಕುಣಿಸುತಿಹುದುಭಯವನು ಮೂರನೆಯದೊಂದು ತೃಣದ ಹಸಿರಿನ ಹುಟ್ಟು ತಾರೆಯೆಸಕದ ಗುಟ್ಟು ದಣಿಯದದನರಸು ನೀಂ - ಮಂಕುತಿಮ್ಮ
ಪಾಕ ನಿನ್ನೂಳದೊಂದು ಸಾಗುತಿಹುದೆಡೆಬಿಡದೆಲೋಕದೆಲ್ಲವು ಸೂಕ್ಷ್ಮಗತಿಯಿನೊಳವೊಕ್ಕುಸಾಕುಬೇಕುಗಳೆಲ್ಲವದರಿನಾ ಯಂತ್ರವನು ಏಕೆರಚಿಸಿದನೊ ವಿಧಿ - ಮಂಕುತಿಮ್ಮ
ನಾವುಣ್ಣುವನ್ನಗಳು ನಾವು ಕಡಿವುದಕಗಳು ನಾವುಸಿರುವೆಲರುಗಳು ನಾವುಡುವ ವಸ್ತ್ರ ಭೂವ್ಯೋಮಗಳ ಯಂತ್ರ ಸಂಘದುತ್ಪನ್ನಗಳು ಜೀವವೆರಡರ ಶಿಶುವು - ಮಂಕುತಿಮ್ಮ
ರವಿಮಾತ್ರದಿಂದಲ್ಲ ಭುವಿಮಾತ್ರದಿಂದಲ್ಲ ಭುವನಪೋಷಣೆಯುಭಯ ಸಹಕಾರದಿಂದ ವಿವಿಧ ಶಕ್ತಿರಸಂಗಳೇಕೀಭವಿಸೆ ಜೀವ ಅವಿತರ್ಕ್ಯ ಸೂಕ್ಷ್ಮವದು - ಮಂಕುತಿಮ್ಮ
ಸ್ಥಾಪಿತವೆ ಜೀವ ನಿನ್ನೂಡಲಿನೊಂದಂಗದಲಿ?ಆಪಾದಶಿರವುಮದು ತುಂಬಿರುವುದಲ್ತೆ?ವ್ಯಾಪಿಸಿಹುದಂತೊಂದು ಚೈತನ್ಯ ವಿಶ್ವದಲಿ ಲೇಪಗೊಳ್ಳದ ಸತ್ತ್ವ - ಮಂಕುತಿಮ್ಮ