ಅನಾಥ ಹಕ್ಕಿಯ ಕೂಗು
ಲೇಖಕರು: ಗಿರಿಮನೆ ಶ್ಯಾಮರಾವ್
ಪ್ರಕಾಶಕರು: ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ, ಹಾಸನ.
₹144.00
₹160.00
10% ರಿಯಾಯಿತಿ
ಲಭ್ಯವಿದೆ
₹೧೬ ಉಳಿತಾಯ (10% ರಿಯಾಯಿತಿ)
ಪುಸ್ತಕದ ಬಗ್ಗೆ
ಮಲೆನಾಡಿನ ರೋಚಕ ಕಥೆಗಳು' ಎಂಬ ಸರಣಿಗಳ ಮೂಲಕ ಪ್ರಸಿದ್ಧಿಯನ್ನು ಪಡೆದಿರುವ ಕಾದಂಬರಿಕಾರರಾದ ಗಿರಿಮನೆ ಶ್ಯಾಮರಾವ್ ಅವರು ಬರೆದ ಮನೋವೈಜ್ಞಾನಿಕ ಕಾದಂಬರಿ ‘ಅನಾಥ ಹಕ್ಕಿಯ ಕೂಗು'. ಮಲೆನಾಡಿನ ರೋಚಕ ಕಥೆಗಳು ಬಹುತೇಕ ಪರಿಸರಕ್ಕೆ ಸಂಬಂಧಿಸಿದ ಕಥನಗಳಾದರೆ ‘ಅನಾಥ ಹಕ್ಕಿಯ ಕೂಗು’ ಎಂಬ ಕೃತಿ ಪತಿ, ಪತ್ನಿ ಮತ್ತು ಮಕ್ಕಳ ಮನಸ್ಸಿನ ತೊಳಲಾಟದ ಬಗ್ಗೆ ಬರೆದಿರುವ ಮನೋವೈಜ್ಞಾನಿಕ ಕಾದಂಬರಿ.
ಗಿರಿಮನೆಯವರೇ ತಮ್ಮ ಬೆನ್ನುಡಿಯಲ್ಲಿ ಬರೆದಿರುವಂತೆ “ ‘ಅನಾಥ ಹಕ್ಕಿಯ ಕೂಗು' ಒಂದು ಮನೋವೈಜ್ಞಾನಿಕ ಕಾದಂಬರಿ. ಹೆತ್ತವರಿದ್ದೂ ತಬ್ಬಲಿಯಾದ ಮಗುವಿನ ಬದುಕು ಸಂಕಟಕ್ಕೆ ಬಿದ್ದರೆ ಅದರ ನೋವು ತಟ್ಟುವುದು ಕೊನೆಗೂ ಹೆತ್ತವರಿಗೇ. ಅದರಲ್ಲೂ ಅಮ್ಮನಿಗೆ ! ಏಕೆಂದರೆ ಒಂಬತ್ತು ತಿಂಗಳು ಹೊಟ್ಟೆಯಲ್ಲಿಟ್ಟು ಬೆಳೆಸಿದ ಅವಳದೇ ಒಂದು ಭಾಗ ಅದು. ನಂತರದ್ದು ಅದರ ರಕ್ಷಣೆಗೆ ನಿಲ್ಲಬೇಕಾದ ಅಪ್ಪನಿಗೆ ! ಇಬ್ಬರ ಪ್ರೀತಿಯೂ ಸಿಗದೆ ಹೋದರೆ ಮಗುವಿನ ಗತಿ? ‘ಹೆತ್ತವರ ಪ್ರೀತಿ ಇಲ್ಲದೆ ಬೆಳೆದ ಮಗು ಸಮಾಜಘಾತಕರಾಗಬಹುದು' ಎಂದು ಎಚ್ಚರಿಸುತ್ತಾರೆ ಮನಃಶಾಸ್ತ್ರಜ್ಞರು.
ಇಡೀ ಭಾರತದಲ್ಲಿ ₹50 ಶಿಪ್ಪಿಂಗ್ · ಕರ್ನಾಟಕದಲ್ಲಿ ₹500 ಮೇಲೆ ಉಚಿತ · ಭಾರತದಲ್ಲಿ ₹500 ಮೇಲೆ ಉಚಿತ
ವಿವರ ↗
ಸುರಕ್ಷಿತ ಪಾವತಿ
ಇಡೀ ಭಾರತಕ್ಕೆ ರವಾನೆ
ಚೆಕ್‌ಔಟ್‌ನಲ್ಲಿ ಉಡುಗೊರೆ ಆಯ್ಕೆ
₹144.00
ವಿಮರ್ಶೆಗಳು
ಇನ್ನೂ ವಿಮರ್ಶೆಗಳಿಲ್ಲ — ಮೊದಲ ವಿಮರ್ಶೆ ನಿಮ್ಮದಾಗಲಿ.